
ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಇಂದೂ ಸಹ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ,ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಗದಗ ,ಧಾರವಾಡ, ಕೊಪ್ಪಳ ,ರಾಯಚೂರು, ಬೆಂಗಳೂರು ನಗರ ,ಚಾಮರಾಜನಗರ ,ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್













