
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.













