
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಾತ್ರ ಸಣ್ಣಗೆ ಮಳೆಯಾಗುತ್ತಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಹಾಗೂರದಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಒಣ ಹವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













