
ಮುಂದಿನ 4 ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.













