
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಹಲವೆಡೆ ಮಳೆಯಾಗುತ್ತಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.













