
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.













