
ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.






















































