
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮೋಡಕವಿದ ವಾತಾವರಣವಿದ್ದು ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ,ಚಾಮರಾಜನಗರ, ಕೊಡಗು, ಹಾಸನ ಮೈಸೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































