
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣವಿದ್ದು, ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















