
ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿಯಲಿದೆ. ಜನವರಿ ಅಂತ್ಯದವರೆಗೂ ರಾಜ್ಯದ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉಳಿದಂತೆ ಚಿಕ್ಕಮಗಳೂರು, ಬೆಂಗಳೂರು, ಚಾಮರಾಜನಗರ ಕೋಲಾರ ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಕಾರವಾರದಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್.



















