
ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಚಳಿಯ ವಾತಾವರಣ ಆರಂಭಗೊಂಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಬೀದರ್ ಧಾರವಾಡ ವಿಜಯಪುರ ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್



















