
ಬಂಗಾಳಕೊಲ್ಲಿ ವಾಯುಭಾರ ಕುಸಿತ ಕಾರಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಹೊರತುಪಡಿಸಿ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಚಂಡಮಾರುತದ ಎಫೆಕ್ಟ್ ತಟ್ಟಲಿದೆ. ಚಾಮರಾಜನಗರ, ಮೈಸೂರು ,ಕೊಡಗು ,ರಾಮನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್



















