
ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮುಂದುವರೆಯಲಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.













