
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ ಶೀತಗಾಳಿ ಬೀಸಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್



















