
ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣವಿರಲಿದ್ದು ಬೆಂಗಳೂರು ಸೇರಿದಂತೆ, ಮಲೆನಾಡು ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ.
ಕರಾವಳಿ ಕರ್ನಾಟಕ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















