
ರಾಜ್ಯದಲ್ಲಿ ಮುಂದಿನ ಎರಡು ವಾರಗಳ ಬಳಿಕ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ,ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಬಿಸಿ ತಟ್ಟಲಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ, 32 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ.
ಮಂಗಳೂರು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















