
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ ,ಕೊಡಗು ,ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು, ಶಿವಮೊಗ್ಗ ,ಚಿತ್ರದುರ್ಗ ,ದಾವಣಗೆರೆ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಲ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್













