
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಉಷ್ಣಾಂಶ ಸ್ಥಿರವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶವಾದ ಪ್ರಮಾಣವು ಎರಡು ಡಿಗ್ರಿಯಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ ಒಂದು ಡಿಗ್ರಿಯಿಂದ ಮೂರು ಡಿಗ್ರಿ ಹೆಚ್ಚಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್











