
ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು ,ಕರಾವಳಿಯಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ. ಕಾರವಾರ ಮತ್ತು ಪಣಂಬೂರಿನಲ್ಲಿ ಸಾಮಾನ್ಯಗಿಂತಲೂ ಗರಿಷ್ಠ ತಾಪಮಾನ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್









