
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ತುಮಕೂರು ಚಿಕ್ಕಮಗಳೂರು ಮತ್ತು ಕೊಡಗಿನ ಕೆಲವೆಡೆ ಭಾರೀ ಗಾಳಿಯೊಂದಿಗೆ (40-50 ಕಿಮೀ ವೇಗದಲ್ಲಿ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು: 29-25
ಉಡುಪಿ: 30-25