
ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಪ್ರಿಲ್ 27ರ ಬಳಿಕ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್




