
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ಮುಖ್ಯಸ್ಥರಾದ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.