
ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ,ಚಿಕ್ಕಬಳ್ಳಾಪುರ, ದಾವಣಗೆರೆ ,ಹಾಸನ ,ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27° ಡಿಗ್ರಿ ಸೆಲ್ಸಿಯಸ್