
ರಾಜ್ಯದಲ್ಲಿ ವಾಡಿಕೆ ಗಿಂತ ಮೊದಲೇ ಮಳೆ ಆರಂಭಗೊಂಡಿದ್ದು ಬಹುತೇಕ ಭಾಗಗಳಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಜೂನ್ ಎರಡರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ,ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































