
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.