
ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ,ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್



















