
ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ ಹಾವೇರಿ ಧಾರವಾಡ ಬೆಳಗಾವಿ ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ ವಾರ ಕೂಡ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್