
ರಾಜ್ಯದ ಹಲವೆಡೆ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































