
ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ,ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಬೆಂಗಳೂರಿನ ನಗರದಲ್ಲಿ ಮಳೆ ಮುಂದುವರಿಯಲಿದೆ .
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















