
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಬೆಳಗಾವಿ ಬೀದರ್, ಕೊಪ್ಪಳ ಬಾಗಲಕೋಟೆ ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಟ 24 ಡಿಗ್ರಿ ಸೆಲ್ಸಿಯಸ್













