
ರಾಜ್ಯದಲ್ಲಿ ಇಂದಿನಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 22 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













