
ರಾಜ್ಯದ ಬಹುತೇಕ ಕಡೆ ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದ್ದು, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ,ಕೋಲಾರ, ತುಮಕೂರು, ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್








