
ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು,ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ದಕ್ಷಿಣ ಕನ್ನಡ ,ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು ಸೇರಿದಂತೆ 24 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 15ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































