
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು ಇಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 20 ರಿಂದ ಅಕ್ಟೋಬರ್ 26ರವರೆಗೆ ಕರಾವಳಿಯ ಉಡುಪಿ ,ಉತ್ತರ ಕನ್ನಡ ,ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















































