
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಸಂಜೆ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್








