
ಮೊಂಥಾ ಚಂಡಮಾರುತದ ಪರಿಣಾಮ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳ್ಳೆ ನಾಡಿನ ಭಾಗಗಳಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮಂಗಳೂರು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















































