
ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆಯ ಆರ್ಭಟ ಶುರುವಾಗಿದೆ, ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.






















































