
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಬೀದರ್ ,ಯಾದಗಿರಿ, ರಾಯಚೂರು, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ ಒಂಬತ್ತು ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್.






















































