
ರಾಜ್ಯದಲ್ಲಿ ಇಂದು ಚಳಿಯ ವಾತಾವರಣವಿರಲಿದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಕರಾವಳಿ ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಳಿಕೆಯಾಗಿದೆ.









