
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಶೀತಗಾಳಿ ತೀವ್ರವಾಗಲಿದ್ದು ತಾಪಮಾನ ಐದು ಡಿಗ್ರಿ ಗೆ ಇಳಿಯುವ ಸಾಧ್ಯತೆ ಇದೆ. ಬೆಳಗಾವಿ ,ಬಾಗಲಕೋಟೆ, ಬೀದರ್ ,ವಿಜಯಪುರ, ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ.



















































































