
ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಶೀತ ಗಾಳಿ ಬೀಸಲಿದೆ.
ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲೂ ಚಳಿಯ ಪ್ರಮಾಣ ಹೆಚ್ಚಾಗಿದ್ದು ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ. ಡಿಸೆಂಬರ್ 17ರಿಂದ ಚಳಿಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.
ಹಿರಿಯರು ಮತ್ತು ಮಕ್ಕಳು ಎಚ್ಚರಿಕೆ ಬಯಸುವಂತೆ ಸೂಚಿಸಲಾಗಿದೆ.





