
ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಏರಿಕೆ ಕಂಡಿದೆ.
ಬೀದರ್ ,ರಾಯಚೂರು, ಯಾದಗಿರಿ ,ಕಲಬುರಗಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿಯ ಪ್ರಮಾಣ ಹೆಚ್ಚಾಗಿರುವ ಕಾರಣ ಜನರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





