
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಚಳಿಯ ಪ್ರಮಾಣ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸಲಿದ್ದು , ಬೀದರ್ ಕಲಬುರಗಿ, ವಿಜಯಪುರ ,ಬಾಗಲಕೋಟೆ, ಬೆಳಗಾವಿ, ಧಾರವಾಡ ,ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಎರಡರಿಂದ ಐದು ಡಿಗ್ರಿ ಕಡಿಮೆ ಆಗಲಿದೆ.



















