
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ,ಹಾಸನ ಕೊಡಗು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಭಾಗಗಳಾದ ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ,ಯಾದಗಿರಿ, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.






















































