
ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲೂ ಒಣಹವೆಯ ವಾತಾವರಣವಿರಲಿದೆ.
ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು ಜನರು ಆರೋಗ್ಯದ ವಿಷಯದಲ್ಲಿ, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



















