ಏಪ್ರಿಲ್ 14ರಂದು ರಾಜ್ಯದಲ್ಲಿ ತೀವ್ರವಾಗಲಿದೆ ಬಿಸಿಲಿನ ತಾಪ…

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಪ್ರಿಲ್ 14 ,ಇಂದು ಬಿಸಿಲಿನ ತಾಪ ಹೆಚ್ಚಿರಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆಯ ವೇಳೆಗೆ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ,ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ತಾಪಮಾನದ ಜೊತೆಗೆ ತೇವಾಂಶ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಕೊಡಗು ಚಾಮರಾಜನಗರ ಮತ್ತು ಮೈಸೂರಿನ ಹಲವು ಭಾಗಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.











