
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ,ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ,ಧಾರವಾಡ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ಕಾರಣ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.













