
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಭಾಗಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ ಇದ್ದು, ಕರಾವಳಿ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ,ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ.

















