
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವೆಡೆ ಮಳೆ ಆಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ,ಹಾಸನ ,ಕೊಡಗು ಮತ್ತು ಚಾಮರಾಜನಗರಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.



















