
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ನಿಂದ 37 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.
ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



